ಕುಂಭಮೇಳದಲ್ಲಿ ಕಾಲ್ತುಳಿತ; ಎರಡನೇ ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ
ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ಸಂದರ್ಭದಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಯ ಸಂಗಮಕ್ಷೇತ್ರದಲ್ಲಿ ಪವಿತ್ರ ಸ್ನಾನಕ್ಕೆ ಭಕ್ತ ಸಾಗರವೇ ಬಂದಿದ್ದು ಜ.28 ಮಧ್ಯರಾತ್ರಿಯ ಬಳಿಕ ಜ.29 ನಸುಕಿನ 1 ಗಂಟೆಯ ಸುಮಾರಿಗೆ ಜನದಟ್ಟಣೆ, ನೂಕು ನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೇ ಎರಡನೇ ಅಮೃತಸ್ನಾನವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

ಜನವರಿ 13ರಂದು ಆರಂಭವಾದ ಮಹಾಕುಂಭ ಮೇಳಕ್ಕೆ ಈ ಬಾರಿ ಅತ್ಯಧಿಕ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ಎರಡನೇ ಅಮೃತ ಸ್ನಾನದ ದಿನವಾದ ಬುಧವಾರ ಲಕ್ಷಾಂತರ ಭಕ್ತರು ಪ್ರಯಾಗ್ರಾಜ್ ಯಾತ್ರೆ ಕೈಗೊಂಡಿರುವುದರಿಂದ ಭಾರಿ ಜನದಟ್ಟಣೆ ಕಂಡುಬಂದಿದೆ. ಕಾಲ್ತುಳಿತ ಘಟನೆ ವರದಿಯಾದ ಬೆನ್ನಲ್ಲೇ ಎರಡನೇ ಅಮೃತಸ್ನಾನವನ್ನು ರದ್ದುಪಡಿಸಲಾಗಿದೆ ಎಂದು ತಿಳಿದು ಬಂದಿದೆ.