ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್’ನಲ್ಲಿ 10 ಸಾವಿರ ರನ್‌ಗಳ ಕ್ಲಬ್‌ಗೆ ಸೇರ್ಪಡೆಗೊಂಡ ಸ್ವೀವ್ ಸ್ಮಿತ್
ಆಸ್ಟ್ರೇಲಿಯಾ ತಂಡದ ಬ್ಯಾಟರ್ ಸ್ವೀವ್ ಸ್ಮಿತ್ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ಗಳ ಕ್ಲಬ್‌ಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಆ ಮೈಲುಗಲ್ಲು ತಲುಪಿದ ಆಸ್ಟ್ರೇಲಿಯಾದ ನಾಲ್ಕನೇ ಹಾಗೂ ವಿಶ್ವದ 15ನೇ ಬ್ಯಾಟ್ಸ್‌ಮನ್ ಎನಿಸಿದ್ದಾರೆ.

ಗಾಲೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಿನ ಪ್ರಥಮ ಟೆಸ್ಟ್‌ನ ಮೊದಲ ದಿನದಂದು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಟೀವ್ ಸ್ಮಿತ್ ಈ ಸಾಧನೆ ಮಾಡಿದ್ದಾರೆ. ಸ್ಮಿತ್ 10 ಸಾವಿರ ರನ್ ಪೂರೈಸುವ ಮೂಲಕ ಸಚಿನ್ ತೆಂಡೂಲ್ಕರ್, ರಿಕಿ ಪಾಂಟಿಂಗ್ ಹಾಗೂ ಬ್ರಿಯಾನ್ ಲಾರಾ ಸಾಲಿಗೆ ಸೇರ್ಪಡೆಯಾಗಿದ್ದಾರೆ.