ಕೌಡಿಚ್ಚಾರು-ಇಳಂತಾಜೆ-ಕೆಯ್ಯೂರು ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ
ಪುತ್ತೂರು: ಕೌಡಿಚ್ಚಾರು-ಇಳಂತಾಜೆ-ಕೆಯ್ಯೂರು ಮಾಡಾವು ಸಂಪರ್ಕ ರಸ್ತೆಗೆ ಈಗಾಗಲೇ ಶಾಸಕ ಅಶೋಕ್ ಕುಮಾರ್ ರೈ ಅವರು ರೂ.5ಕೋಟಿ ಅನುದಾನ ಒದಗಿಸಿದ್ದು ಅದರ ಗುದ್ದಲಿ ಪೂಜೆಯನ್ನು ಇತ್ತೀಚೆಗೆ ಶಾಸಕ ಅಶೋಕ್ ಕುಮಾರ್ ರೈ ಅವರು ನೆರವೇರಿಸಿದ್ದದರು. ಜ.30ರಂದು ಕಾಮಗಾರಿಗೆ ಚಾಲನೆ ನೀಡಲಾಯಿತು.
ತೆಂಗಿನ ಕಾಯಿ ಒಡೆಯುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದ ಕಾಂಗ್ರೆಸ್ ಮುಖಂಡ ಸಂತೋಷ್ ರೈ ಇಳಂತಾಜೆ ಮಾತನಾಡಿ ಶಾಸಕ ಅಶೋಕ್ ಕುಮಾರ್ ರೈ ಅವರು ರೂ. 5 ಕೋಟಿ ಅನುದಾನ ಒದಗಿಸುವ ಮೂಲಕ ನಮ್ಮ ಬಹುಕಾಲದ ಬೇಡಿಕೆ ಈಡೇರಿಸಿದ್ದು ನುಡಿದಂತೆ ನಡೆದಿದ್ದಾರೆ, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ಶಾಸಕರ ಕಾರ್ಯ ಅಭಿನಂದನೀಯ ಎಂದು ಹೇಳಿದರು.
ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಮಾತನಾಡಿ ಶಾಸಕ ಅಶೋಕ್ ರೈ ಅವರು ಗ್ರಾಮೀಣ ಭಾಗಗಳಿಗೆ ಹೆಚ್ಚಿನ ಅನುದಾನಗಳನ್ನು ನೀಡುವ ಮೂಲಕ ಗ್ರಾಮದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡುತ್ತಿದ್ದಾರೆ ಎಂದು ಹೇಳಿದರು.
ಅಶೋಕ್ ರೈ ದೇರ್ಲ, ನಿವೃತ್ತ ಮುಖ್ಯಗುರು ರಾಮಣ್ಣ ಆಚಾರಿಮೂಲೆ, ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಗಣಪತಿ ಭಟ್ ಆಚಾರಿಮೂಲೆ, ಬಾಳಪ್ಪ ದೇರ್ಲ, ಕೃಷ್ಣಪ್ಪ ಗೌಡ ಆಚಾರಿಮೂಲೆ ಇನ್ನಿತರರು ಉಪಸ್ಥಿತರಿದ್ದರು. ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.