ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್
ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗ ಧಾರವಾಡ ಹೈಕೋರ್ಟ್ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಆದರೆ, ಈ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ.