ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ
ಮಣಿಪುರದ ಮುಖ್ಯಮಂತ್ರಿ ಸ್ಥಾನಕ್ಕೆ ಎನ್. ಬಿರೇನ್ ಸಿಂಗ್ ಭಾನುವಾರ ದಿಢೀರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಬಗ್ಗೆ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಪ್ರತಿಪಕ್ಷಗಳು ಚರ್ಚೆಯಲ್ಲಿ ತೊಡಗಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ನವದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಬಿರೇನ್ ಸಿಂಗ್ ಭೇಟಿಯಾದ ಸ್ವಲ್ಪ ಸಮಯದ ನಂತರ ಇಂಫಾಲ್‌ನಲ್ಲಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಇದಕ್ಕೂ ಮೊದಲು ಸಿಂಗ್ ಅವರು ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಶಾಸಕರೊಂದಿಗೆ ಸಿಎಂ ಸೆಕ್ರೆಟರಿಯೇಟ್‌ನಲ್ಲಿ ಸಭೆ ನಡೆಸಿದರು.
ಸಿಂಗ್ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿತ್ತು. ಇದರ ಬೆನ್ನಲ್ಲೇ ಬಿರೇನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.