ಒಳಮೊಗ್ರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ಮನ್ಮಥರಿಗೆ ಬೀಳ್ಕೊಡುಗೆ ಸಮಾರಂಭ
ಪುತ್ತೂರು: ಗ್ರಾಮ ಪಂಚಾಯತ್ ಆಡಳಿತ ಮಂಡಳಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮ ಅಧಿಕಾರದ ಅಲ್ಪ ಅವಧಿಯಲ್ಲಿ ಪ್ರಾಮಾಣಿಕವಾಗಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಪಂಚಾಯತ್‌ನ ಎಲ್ಲಾ ಕೆಲಸಗಳನ್ನು ಕೂಡ ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದ ಹೆಗ್ಗಳಿಕೆ ಇವರದ್ದಾಗಿದೆ ಎಂದು ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಹೇಳಿದರು.
ಅವರು ಒಳಮೊಗ್ರು ಗ್ರಾಪಂ ಕಛೇರಿ ಸಭಾಂಗಣದಲ್ಲಿ ನಡೆದ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳರವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು

ಐದೂವರೆ ತಿಂಗಳುಗಳ ಕಾಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಎಲ್ಲರ ಪ್ರೀತಿ ಗಳಿಸಿಕೊಂಡಿದ್ದ ಮನ್ಮಥ ಅಜಿರಂಗಳರವರಿಗೆ ಗ್ರಾಪಂ ವತಿಯಿಂದ ಸನ್ಮಾನದ ಅಭಿನಂದನೆ ಸಲ್ಲಿಸಲಾಯಿತು. ಶಾಲು ಹಾಕಿ, ಹೂ ಗುಚ್ಛ, ಅಭಿಮಾನದ ಗೌರವಾರ್ಪಣೆ ಪತ್ರವನ್ನು ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು. ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು ಇದ್ದರು.