ಮುಡಾ ಪ್ರಕರಣ: ಸುಪ್ರೀಂ ಕೋರ್ಟ್ ಮೊರೆ ಹೋಗಲ್ಲ- ಸ್ನೇಹಮಯಿ ಕೃಷ್ಣ
ಬೆಂಗಳೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಅರ್ಜಿಯನ್ನು ರದ್ದುಗೊಳಿಸಿರುವ ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸುವುದಿಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮೊದಲ ಆರೋಪಿಯಾಗಿದ್ದರೆ, ಅವರ ಪತ್ನಿ ಬಿ.ಎಂ. ಪಾರ್ವತಿ ಎರಡನೇ ಹಾಗೂ ಅವರ ಭಾಮೈದುನ ಮಲ್ಲಿಕಾರ್ಜುನ ಸ್ವಾಮಿ ಮೂರನೇ ಆರೋಪಿಯಾಗಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ತೀಚಿಗೆ ರದ್ದುಗೊಳಿಸಿತ್ತು.