ರಾಜಕೀಯರಾಷ್ಟ್ರೀಯ

2026ರ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ; ಮಮತಾ

ಮುಂಬರಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ದೆಹಲಿಯಲ್ಲಿ ಆಮ್ ಆದ್ಮ ಪಕ್ಷಕ್ಕೆ ಕಾಂಗ್ರೆಸ್‌ ಸಹಾಯ ಮಾಡಲಿಲ್ಲ, ಹರ್ಯಾಣದಲ್ಲಿ ಎಎಪಿ ಕಾಂಗ್ರೆಸ್‌ಗೆ ಸಹಾಯ ಮಾಡಲಿಲ್ಲ, ಆದ್ದರಿಂದ ಎರಡೂ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಎಲ್ಲರೂ ಒಗ್ಗಟ್ಟಾಗಿರಬೇಕು. ಆದರೆ ಬಂಗಾಳದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ, ನಾವು ಒಂಟಿಯಾಗಿ ಹೋರಾಡುತ್ತೇವೆ, ನಾವೇ ಸಾಕು ಎಂದು ಬ್ಯಾನರ್ಜಿ ಹೇಳಿರುವುದಾಗಿ ವರದಿಯಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು 2026ರಲ್ಲಿ ನಡೆಯಲಿದೆ. ಕಾಂಗ್ರೆಸ್ ಅಥವಾ ಇತರ ಪಕ್ಷಗಳೊಂದಿಗೆ ಯಾವುದೇ ಮೈತ್ರಿಯನ್ನು ತಳ್ಳಿಹಾಕಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮುಂಬರುವ ವಿಧಾನಸಭೆಯ ಬಜೆಟ್ ಅಧಿವೇಶನಕ್ಕೂ ಮುನ್ನ ಪಕ್ಷದ ಶಾಸಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಬ್ಯಾನರ್ಜಿ, ಬಹುಮತ ಪಡೆಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!