ರಾಷ್ಟ್ರೀಯ

ಭಾರತ-ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಕ್ರಿಕೆಟ್ ಪಂಡ್ಯಾಟದ ವೇಳೆ ಮೈದಾನಕ್ಕೆ ನುಗ್ಗಿದ ಹಾವು

ಗುವಾಹಟಿ: ಭಾರತ-ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಟಿ20 ಪಂದ್ಯದ ವೇಳೆ ಹಾವೊಂದು ಮೈದಾನದಲ್ಲಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ನಿರ್ಮಿಸಿತ್ತು.

ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್‌ ಇಂಡಿಯಾ ಮೊದಲು ಬ್ಯಾಟಿಂಗ್‌ ನಡೆಸುತ್ತಿದೆ. ಮೊದಲ ಇನ್ನಿಂಗ್ಸ್‌ ನಲ್ಲಿ 7 ಓವರ್‌ ಕಳೆಯುವಷ್ಟರಲ್ಲಿ ಭಾರತ ವಿಕೆಟ್‌ ನಷ್ಟವಿಲ್ಲದೆ 68 ರನ್‌ಗಳಿಸಿತ್ತು. ಈ ವೇಳೆ ಮೈದಾನದಲ್ಲಿ ಹಾವೊಂದು ಕಾಣಿಸಿಕೊಂಡ ಪರಿಣಾಮ ಕೆಲಕಾಲ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ನಂತರ ಮೈದಾನದ ಸಿಬ್ಬಂದಿಗಳ ಆಗಮಿಸಿ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!