ಉದಯಗಿರಿ ಪೊಲೀಸ್ ಠಾಣೆಗೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಭೇಟಿ
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಎದುರು ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಪೊಲೀಸರು ಒಂದು ಸಾವಿರ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಈ ಪ್ರಕರಣದಲ್ಲಿ ಯಾವುದೇ ಅಮಾಯಕರನ್ನು ಪೊಲೀಸರು ಬಂಧಿಸುವುದಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಗುರುವಾರ ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ವ್ಯಕ್ತಿಯೊಬ್ಬನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಬಂದ ಧರ್ಮನಿಂದನೆ ಪೋಸ್ಟ್ ಬಳಿಕ ಕಲ್ಲು ತೂರಾಟ ಪ್ರಕರಣ ನಡೆದಿತ್ತು.