ಊರಿಗೆ ಮರಳುವ ಸಂಭ್ರಮದಲ್ಲಿದ್ದ ವ್ಯಕ್ತಿ ನಿಧನ
ಬೆಳ್ತಂಗಡಿ: ಇಂದು ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಎಂಬವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.

ಊರಿಗೆ ಬರುವ ಸಂಭ್ರಮದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತನಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿ ಜಿದ್ದಾದಿಂದ ರಾತ್ರಿ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ತಲುಪುವವರಿದ್ದರು.
ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಅಲ್ಲಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅದಾಗಲೇ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.