ಉದಯಗಿರಿ ಗಲಭೆ: ಘಟನೆಯಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ
ಮೈಸೂರು: ಉದಯಗಿರಿ ಗಲಭೆ ಘಟನೆಯಲ್ಲಿ ಭಾಗಿಯಾದವರನ್ನು ಮುಲಾಜಿಲ್ಲದೇ ಬಂಧಿಸಿ ಎಲ್ಲರ ಮೇಲೂ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮೈಸೂರು ಡಿಸಿ, ಎಸ್ಪಿ ಹಾಗೂ ಮೈಸೂರು ಪೊಲೀಸ್ ಆಯುಕ್ತರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿದ್ದಾರೆ.
ಡಿಜಿ, ಐಜಿ, ಡಿಸಿ, ಎಸ್ಪಿ ಹಾಗೂ ಕಮೀಷನರ್ ರಿಂದ ಘಟನೆಯ ಸಂಪೂರ್ಣ ಮಾಹಿತಿ ತಿಳಿದುಕೊಂಡ ಸಿಎಂ ಸಿದ್ದರಾಮಯ್ಯ ಘಟನೆಯಲ್ಲಿ ಭಾಗಿ ಆದವರನ್ನು ಮುಲಾಜಿಲ್ಲದೇ ಬಂಧಿಸಿ ಎಲ್ಲರ ಮೇಲೂ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.