ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ: ಚಾಲಕ ಸ್ಥಳದಲ್ಲೇ ಮೃತ್ಯು
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ನಡೆದಿದೆ.

ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ (37ವ) ಮೃತಪಟ್ಟವರು. ಮಹಾಬಲ ಅವರ ಸಂಬಂಧಿ ಮಕ್ಕಳನ್ನು ಮೂಡಬಿದರೆಯ ಮಿಜಾರು ಎಂಬಲ್ಲಿಗೆ ಜಾತ್ರೆಗೆ ಕರೆದುಕೊಂಡು ಹೋಗಿ ವಾಪಸ್ ಮನೆಗೆ ಬರುವ ವೇಳೆ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ಕಳೆದಕೊಂಡ ರಿಕ್ಷಾ ತಲೆಕೆಳಗಾದ ಸ್ಥಿತಿಯಲ್ಲಿ ಚರಂಡಿಗೆ ಬಿದ್ದಿದೆ. ಚಾಲಕ ರಿಕ್ಷಾದ ಅಡಿಯಲ್ಲಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟರೆ ಉಳಿದಂತೆ ರಿಕ್ಷಾದಲ್ಲಿದ್ದ ಪ್ರಯಾಣಿಕರಾದ ಮೂವರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ .