ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಸಭೆ
ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವುರವರ ಅಧ್ಯಕ್ಷತೆಯಲ್ಲಿ ನಡೆಯಿತು.
![](https://newsbites.in/wp-content/uploads/2025/02/image_editor_output_image-887940039-17396160396202795385649316045135-300x114.jpg)
ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು ಬ್ಲಾಕ್ ಸಮಿತಿಗಳಿಗೆ ಸೂಚಿಸಲಾಯಿತು. ಬಳಿಕ ಮುಂಬರುವ ಜಿ.ಪಂ, ತಾ.ಪಂ ಚುನಾವಣೆಯ ಕುರಿತು ಹಾಗೂ ಪಕ್ಷದ ಸ್ಪರ್ಧೆಯ ಕುರಿತು ಸಮಗ್ರವಾಗಿ ಚರ್ಚಿಸಿ ಕಾರ್ಯಯೋಜನೆ ರೂಪಿಸಲಾಯಿತು.
ದ.ಕ ಜಿಲ್ಲೆಯನ್ನು ವಿಭಜಿಸಿ ಪುತ್ತೂರನ್ನು ಕೇಂದ್ರೀಕರಿಸಿ ಪುತ್ತೂರು ಜಿಲ್ಲೆಯಾಗಿ ಘೋಷಣೆ ಮಾಡಬೇಕೆಂದು ಸಭೆಯಲ್ಲಿ ನಿರ್ಣಯ ಕೈಗೊಂಡು ಮುಂದಿನ ಹೋರಾಟದ ರೂಪುರೇಷೆಯನ್ನು ತಯಾರಿಸಲಾಯಿತು.
ಪುತ್ತೂರಿನಲ್ಲಿ ಸುಸಜ್ಜಿತವಾದ ಸರಕಾರಿ ಆಸ್ಪತ್ರೆ ಮತ್ತು ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಹೋರಾಟ ತೀವ್ರಗೊಳಿಸುವ ಬಗ್ಗೆ ಚರ್ಚಿಸಲಾಯಿತು.
ಕೇಂದ್ರ ಸರ್ಕಾರದ ನೂತನ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಜನಜಾಗೃತಿ ಮೂಡಿಸಿ, ಕ್ಷೇತ್ರದ ಸರ್ವ ಜಾತ್ಯಾತೀತರನ್ನು ಒಟ್ಟು ಸೇರಿಸಿ ಮುಂದಿನ ದಿನಗಳಲ್ಲಿ ಈ ಹೋರಾಟವನ್ನು ತೀವ್ರಗೊಳಿಸುವ ಬಗ್ಗೆ ಯೋಜನೆ ರೂಪಿಸಲಾಯಿತು.
ಸಭೆಯಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರ , ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಪುತ್ತೂರು ಕ್ಷೇತ್ರ ಸಮಿತಿ ಉಪಾಧ್ಯಕ್ಷ ಹಮೀದ್ ಸಾಲ್ಮರ, ಕ್ಷೇತ್ರ ಸಮಿತಿ ಸದಸ್ಯರು ಹಾಗೂ ಬ್ಲಾಕ್ ನಾಯಕರು ಉಪಸ್ಥಿತರಿದ್ದರು.
ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಎ.ಕೆ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ರಹೀಂ ಪುತ್ತೂರು ವಂದಿಸಿದರು.