ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ರವರನ್ನು ನೇಮಕಗೊಳಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ರಾಧಾಕೃಷ್ಣ ಬೊಳ್ಳೂರುರವರು ಈ ಹಿಂದೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ, ಜಾಲ್ಸೂರು ಜಿ.ಪಂ. ಕ್ಷೇತ್ರದಿಂದ ಕಾಂಗ್ರೆಸ್ ಜಿಲ್ಲಾ ಪಂಚಾಯತ್ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಇವರು ಅಮರಮುಡ್ನೂರು ಗ್ರಾಮದ ಬೊಳ್ಳೂರು ನಿವಾಸಿ.