ಮೈಸೂರು: ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಮೈಸೂರು: ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಕುಶಾಲ್ (15ವ), ಚೇತನ್ (45ವ), ರೂಪಾಲಿ (43ವ), ಪ್ರಿಯಂವಧಾ (62ವ) ಎಂದು ಗುರುತಿಸಲಾಗಿದೆ. ಚೇತನ್ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್ಗೆ ವಿಷವುಣಿಸಿ ಸಾಯಿಸಿ ನಂತರ ತಾನು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.