ಯುಪಿ ಸಿಎಂ ಯೋಗಿ ಆದಿತ್ಯನಾಥ ವಿರುದ್ದ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ
ಕೊಲ್ಕತ್ತಾ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಹಾಕುಂಭ ಮೇಳದ ಸಂದರ್ಭದಲ್ಲಿ ನಡೆದ ಕಾಲ್ತುಳಿತದ ಸಾವುಗಳಿಗೆ ಸಂಬಂಧಿಸಿದಂತೆ ಮತ್ತು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಜನಸಂದಣಿಯ ಅಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿ ವಾಗ್ದಾಳಿ ನಡೆಸಿದ್ದಾರೆ.

ಮಹಾಕುಂಭವನ್ನು “ಮೃತ್ಯು ಕುಂಭ” ಎಂದು ಕರೆದಿರುವ ಮಮತಾ ಬ್ಯಾನರ್ಜಿ ವಿಐಪಿಗಳಿಗೆ ವಿಶೇಷ ಸವಲತ್ತುಗಳನ್ನು ನೀಡಲಾಗುತ್ತಿದ್ದರೂ, ಬಡವರಿಗೆ ಅಗತ್ಯ ಸೌಲಭ್ಯಗಳನ್ನು ನಿರಾಕರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಟೀಕಿಸಿದ ಅವರು, “ರಾಷ್ಟ್ರವನ್ನು ವಿಭಜಿಸಲು ಧರ್ಮವನ್ನು ಮಾರಾಟ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ. ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಕಾರ್ಯಕ್ರಮಕ್ಕೆ ಸರಿಯಾದ ಯೋಜನೆಯ ಕೊರತೆಯಿದೆ ಎಂದು ಅವರು ಆರೋಪಿಸಿದ್ದಾರೆ.