ಅರ್ಹತೆ ಇಲ್ಲದೇ ಬಿಪಿಎಲ್ ಕಾರ್ಡ್ ಪಡೆದಿರುವವರು ವಾಪಾಸ್ ಮಾಡದಿದ್ದರೆ ಬೀಳಲಿದೆ ದಂಡ
ಬೆಂಗಳೂರು: ಅರ್ಹತೆ ಇಲ್ಲದೇ ಬಿಪಿಎಲ್ ಕಾರ್ಡ್ ಪಡೆದಿರುವವರ ಮೇಲೆ ದಂಡ ಬೀಳಲಿದೆ. ಈ ಬಗ್ಗೆ ಪ್ರಯೋಗಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು
ಆಹಾರ ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಅರ್ಹತೆ ಇಲ್ಲದೇ ಇರುವವರು ಬಿಪಿಎಲ್ ಕಾರ್ಡ್ ವಾಪಸ್ ಮಾಡಿ ಎಂದು ಅವರು ಕರೆ ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಅರ್ಹತೆ ಇಲ್ಲದೇ ಇರುವವರು ಸಾಕಷ್ಟು ಜನ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಇವರಿಗೆ ಕಾರ್ಡ್ ವಾಪಸ್ ಕೊಡಲು ಮನವಿ ಮಾಡುತ್ತೇವೆ. ಇನ್ನೊಂದು ವಾರದಲ್ಲಿ ಜಾಹೀರಾತು ಹೊರಡಿಸುತ್ತೇವೆ. ಮನವಿ ಮಾಡಿದ ಮೇಲೂ ಕಾರ್ಡ್ ವಾಪಸ್ ಕೊಡದೇ ಹೋದರೆ ಬಳಿಕ ದಂಡ ಪ್ರಯೋಗ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.