ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇಮಕಕ್ಕೆ ತಡೆ
ಸುಳ್ಯ: ಕಳೆದ ವಾರವಷ್ಟೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ರಾಧಾಕೃಷ್ಣ ಬೊಳ್ಳೂರುವರ ನೇಮಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ರವರು ಈ ಕುರಿತು ಆದೇಶ ಹೊರಡಿಸಿದ್ದು ರಾಧಾಕೃಷ್ಣ ಬೊಳ್ಳೂರುರವರ ನೇಮಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕ ತಡೆಹಿಡಿಯಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಬೊಳ್ಳೂರು ನೇಮಕದ ವಿರುದ್ಧ ಕೆಲ ಹಿರಿಯ ಕಾಂಗ್ರೆಸ್ ನಾಯಕರಿಗೆ ಅಸಮಾಧಾನವಿತ್ತೆಂದು ಈ ಕುರಿತು ಅವರು ಡಿ.ಕೆ.ಶಿವಕುಮಾರ್ ರವರಿಗೆ ದೂರಿಕೊಂಡಿದ್ಧರೆಂದೂ ಈ ಹಿನ್ನಲೆಯಲ್ಲಿ ತಾತ್ಕಾಲಿಕ ತಡೆ ನೀಡಲಾಗಿರುವುದಾಗಿ ತಿಳಿದುಬಂದಿದೆ. ಆ ಮೂಲಕ ಸುಳ್ಯ ಕಾಂಗ್ರೆಸ್ ಬಣ ರಾಜಕೀಯ, ಆಂತರಿಕ ಕಚ್ಚಾಟ ಮತ್ತೆ ಮುನ್ನೆಲೆಗೆ ಬಂದಿದೆ.