ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಗುಡ್ ನ್ಯೂಸ್ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
‘ಗೃಹಲಕ್ಷ್ಮಿ’ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು ಒಂದು ವಾರದಲ್ಲಿ ಹಣ ಜಮೆ ಮಾಡುವುದಾಗಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ತಾನು ಕಾರು ಅಪಘಾತದಿಂದಾಗಿ ಒಂದು ತಿಂಗಳಿಗೂ ಹೆಚ್ಚು ಅವಧಿಗೆ ಆಸ್ಪತ್ರೆ ಮತ್ತು ಮನೆಯಲ್ಲೇ ಉಳಿಯುವಂತಾಗಿದ್ದರಿಂದ ಹಣ ವರ್ಗಾವಣೆ ವಿಳಂಬವಾಗಿರುವುದಕ್ಕೆ ಒಂದು ಕಾರಣವಾಗಿದೆ. ತಾನು ಕಚೇರಿಯಲ್ಲಿದಿದ್ದರೆ ಹಣಕಾಸು ಇಲಾಖೆ ಮೇಲೆ ನಿರಂತರವಾಗಿ ಒತ್ತಡ ಹಾಕಿ ಹಣ ಬಿಡುಗಡೆ ಮಾಡಿಸಲು ಪ್ರಯತ್ನಿಸುತ್ತಿದ್ದೆ, ಗೃಹಲಕ್ಷ್ಮಿಯರು ಆತಂಕಪಡುವ ಅಗತ್ಯವಿಲ್ಲ, ಒಂದು ವಾರದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕಿಸುವುದಾಗಿ ಭರವಸೆ ನೀಡಿದರು.