ಮಂಗಳೂರು: ವಕ್ಫ್ ಮಸೂದೆ ತಿದ್ದುಪಡಿ ವಿರುದ್ಧ SKSSF ಬೃಹತ್ ಪ್ರತಿಭಟನೆ
ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಎಸ್ ಕೆಎಸ್ ಎಸ್ ಎಫ್ ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನಾ ಸಮಾವೇಶ ಫೆ.21ರಂದು ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಸಮಸ್ತ ಕೇಂದ್ರ ಮುಶಾವರ ಸದಸ್ಯ ಉಸ್ಮಾನ್ ಫೈಝಿ, ಎಸ್‌ವೈಎಸ್ ದ.ಕ.ಜಿಲ್ಲಾಧ್ಯಕ್ಷ ಮೌಲಾನಾ ಅಝೀಝ್ ದಾರಿಮಿ ಮಾತನಾಡಿ, ಕೇಂದ್ರ ಸರಕಾರವು ವಕ್ಫ್ ಆಸ್ತಿಯ ಸುಧಾರಣೆ ನೆಪದಲ್ಲಿ ಕಸಿದುಕೊಳ್ಳಲು ಷಡ್ಯಂತ್ರ ನಡೆಸುತ್ತಿದೆ ಎಂದರು.
ಎಸ್ಕೆಎಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಅನೀಸ್ ಕೌಸರಿ ಮಾತನಾಡಿ, ವಕ್ಫ್ ಇದು ಔದಾರ್ಯವಲ್ಲ. ನಮ್ಮ ಹಕ್ಕಾಗಿದೆ. ತಿದ್ದುಪಡಿ ಮಸೂದೆಯ ಮೂಲಕ ಅದನ್ನು ಸಾರ್ವಜನಿಕಗೊಳಿಸಲು ಬಿಡುವುದಿಲ್ಲ ಎಂದು ಹೇಳಿದರು. ನೂರಾರು ಮಂದಿ ಭಾಗವಹಿಸಿದ್ದರು.