ಕರಾವಳಿಕ್ರೈಂ

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ ಮೃತ್ಯು

ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16ವ ) ಮೃತ ದುರ್ದೈವಿ.


ಪವನ್ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅಜ್ಜಿ ಮನೆಗೆಂದು ಬಂದವ ಆಕಸ್ಮಿಕವಾಗಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!