ಗ್ಯಾರಂಟಿ ಯೋಜನೆಗಳ ಹಣ ಜಮಾ ಮಾಡುವ ದಿನಾಂಕ ನಿಗದಿ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ
ಬೆಂಗಳೂರು: ಮುಂಬರುವ ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆಗಳ ಕ್ಯಾಲೆಂಡರ್ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಂಚ ಗ್ಯಾರಂಟಿಳಿಗೆ ಆಯಸ್ಸು ಕಡಿಮೆಯಾಗಿದೆ. ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರೇ ಗ್ಯಾರಂಟಿಯಿಂದ ಹೊರೆಯಾಗುತ್ತಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಈಗಾಗಲೇ ಪರಿಷ್ಕರಣೆ ನೆಪದಲ್ಲಿ ಲಕ್ಷಾಂತರ ಬಿಪಿಎಲ್ ಕಾರ್ಡ್ ರದ್ದುಪಡಿಸಿ ಬಡವರ ತುತ್ತು ಅನ್ನಕ್ಕೆ ಕಲ್ಲುಹಾಕಲಾಗಿದೆ. ಮತ್ತೊಂದು ಕಡೆ ಗ್ಯಾರಂಟಿಗಳಿಗೆ ಮುಂದುವರೆಯುವ ಗ್ಯಾರಂಟಿ ಇಲ್ಲ. ಮೂರು ನಾಲ್ಕು ತಿಂಗಳಿಗೊಮ್ಮೆ ಹಣ ಜಮಾ ಮಾಡೋ ಗೃಹಲಕ್ಷ್ಮಿ ಮತ್ತು ಯುವನಿಧಿ ಫಲಾನುಭವಿಗಳಿಗೆ ಸಹಾಯ ಮಾಡ್ತಿಲ್ಲ. ಸಿಎಂ ಸಿದ್ದರಾಮಯ್ಯ ನವರು ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಜಮಾ ದಿನಾಂಕ ತಿಳಿಸಬೇಕೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆಂದು ಹೇಳಿದ್ದಾರೆ.