ಡಿಸಿಎಂ ಡಿಕೆಶಿ ವಿರುದ್ದ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ವೇಳೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿರುವ ‘ನಟ್ಟು ಬೋಲ್ಟ್ ಟೈಟ್ ‘ಮಾಡುವೆ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕನ್ನಡ ಸಿನಿಮಾ ಕಲಾವಿದರಿಗೆ ಡಿಕೆ ಶಿವಕುಮಾರ್ ಧಮ್ಕಿ ಹಾಕಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ಒಪ್ಪಲು ಸಾಧ್ಯವಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.