ಸುಳ್ಯದಲ್ಲಿ ಗರಿಷ್ಠ ಉಷ್ಣಾಂಶ ದಾಖಲು
ಕರಾವಳಿ ಕರ್ನಾಟಕದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ದೇಶದಲ್ಲಿ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದ್ದು ಜನಜೀವನ ಮತ್ತು ಕೃಷಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಕರಾವಳಿ ಕರ್ನಾಟಕದ ಭಾಗದಲ್ಲಿ ಈಗಾಗಲೇ ಬಿಸಿಲಿಗೆ ಜನ ತತ್ತರಿಸಿ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿ ಮತ್ತು ಆರ್ದ್ರತೆಯ ವಾತಾವರಣ ಮುಂದುವರೆದಿದ್ದು, ಪ್ರದೇಶದಾದ್ಯಂತ ತಾಪಮಾನ ಏರುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 1 ರವರೆಗೆ ಬೆಳಿಗ್ಗೆ 8.30 ರ ನಡುವೆ ರಾಜ್ಯದಲ್ಲಿ ಅತಿ ಹೆಚ್ಚು ಗರಿಷ್ಠ ತಾಪಮಾನ 40.1°C ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಕೂಡ ಗುರುವಾರ 40.4 ಡಿಗ್ರಿ ಸೆಲ್ಸಿಯಸ್ ಬಿಸಿಲಿನ ತಾಪ ದಾಖಲಾಗಿತ್ತು ಎಂದು ವರದಿಯಾಗಿದೆ .