ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶವ ಪತ್ತೆ ಪ್ರಕರಣ: ಓರ್ವನ ಬಂಧನ
ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಹದ್ದೂರ್‌ಗಢ ನಿವಾಸಿಯಾದ ಶಂಕಿತ ವ್ಯಕ್ತಿ ನರ್ವಾಲ್‌ನ ಸ್ನೇಹಿತ ಬಂಧಿತ ಎಂದು ತಿಳಿದು ಬಂದಿದೆ.

ನರ್ವಾಲ್ ಅವರ ಮೃತದೇಹ ರೋಹ್ಟಕ್‌ನಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿ ಪತ್ತೆಯಾಗಿದ್ದು, ನಂತರ ಹರಿಯಾಣ ಪೊಲೀಸರು ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದರು.
ನರ್ವಾಲ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತೆಯಾಗಿದ್ದರು ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅವರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲೂ ಭಾಗವಹಿಸಿದ್ದರು.
ಭಾನುವಾರ ಆಕೆಯ ಕುಟುಂಬವು ತಪ್ಪಿತಸ್ಥನನ್ನು ಬಂಧಿಸುವವರೆಗೆ ಆಕೆಯ ದೇಹವನ್ನು ಅಂತ್ಯಕ್ರಿಯೆ ಮಾಡಲು ನಿರಾಕರಿಸಿತು.