ಕ್ರಿಕೆಟಿಗ ರೋಹಿತ್ ಶರ್ಮಾ ದೇಹತೂಕದ ಬಗ್ಗೆ ಹೇಳಿಕೆ: ಶಮಾ ಮೊಹಮ್ಮದ್ ಗೆ ಕಾಂಗ್ರೆಸ್ ಛೀಮಾರಿ
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ದೇಹತೂಕದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್ ಗೆ ಕಾಂಗ್ರೆಸ್ ಛೀಮಾರಿ ಹಾಕಿದೆ. ಅಲ್ಲದೆ ಶಮಾ ಅವರ ಈ ಹೇಳಿಕೆ ವೈಯಕ್ತಿಕವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ.

‘ರೋಹಿತ್ ಶರ್ಮಾ ದಪ್ಪಗಿದ್ದಾರೆ. ಅವರು ತೂಕ ಕಳೆದುಕೊಳ್ಳಬೇಕಾಗಿದೆ. ರೋಹಿತ್ ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ’ ಎಂದು ಬರೆದುಕೊಂಡಿದ್ದರು.
‘ಡಾ. ಶಮಾ ಮೊಹಮ್ಮದ್ ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಪಕ್ಷಕ್ಕೆ ಸಂಬಂಧವಿಲ್ಲ. ಪೋಸ್ಟ್ ಅನ್ನು ಡಿಲೀಟ್ ಮಾಡುವಂತೆ ಅವರಿಗೆ ಸೂಚಿಸಲಾಗಿದೆ. ಭವಿಷ್ಯದಲ್ಲಿ ಎಚ್ಚರಿಕೆ ಪಾಲಿಸಬೇಕು ಎಂದು ತಿಳಿಸಲಾಗಿದೆ’ ಎಂದು ಕಾಂಗ್ರೆಸ್ನ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ತಿಳಿಸಿದ್ದಾರೆ.