ಅಂತರ್ರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮತ್ತೊಂದು ದಾಖಲೆ ಬರೆದ ಕೊಹ್ಲಿ
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.

ದುಬೈನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಜೋಶ್ ಇಂಗ್ಲಿಸ್ ಕ್ಯಾಚ್ ಪಡೆಯುವ ಮೂಲಕ ಭಾರತದ ಪರ ಅತೀ ಹೆಚ್ಚು ಕ್ಯಾಚ್ ಪಡೆದ ಸಾಧನೆ ಮಾಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಇದು ಅವರ 335ನೇ ಕ್ಯಾಚ್ ಆಗಿದೆ. ದ್ರಾವಿಡ್ ಒಟ್ಟು 333 ಕ್ಯಾಚ್ ಗಳನ್ನು ಪಡೆದಿದ್ದು, ಮಹಮದ್ ಅಜರುದ್ದೀನ್ 261 ಕ್ಯಾಚ್ ಪಡೆದು ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ 256 ಕ್ಯಾಚ್ ಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ 229 ಕ್ಯಾಚ್ ಗಳೊಂದಿಗೆ 5ನೇ ಸ್ಥಾನದಲ್ಲಿದ್ದಾರೆ.