ಸುಳ್ಯ: ಕಂಟೇನರ್ ಪಲ್ಟಿ
ಸುಳ್ಯ ಮುಖ್ಯ ರಸ್ತೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ ಸ್ಟಾಲ್ ಗೆ ಕಂಟೇನರ್ ಡಿಕ್ಕಿ ಹೊಡೆದು ಕಟ್ಟಡದ ಒಂದು ಭಾಗ ಸಂಪೂರ್ಣ ಹಾನಿಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ.

ತರಕಾರಿ ಮತ್ತು ಹಣ್ಣುಹಂಪಲುಗಳನ್ನು ತುಂಬಿಕೊಂಡು ಬರುತ್ತಿದ್ದ ಕಂಟೈನರ್ ವಾಹನ ಪುಟ್ ಪಾತ್ ಗೆ ನಿರ್ಮಿಸಿದ ತಡೆ ಬೇಲಿಗೆ ಗುದ್ದಿ ಬಳಿಕ ನಂದಿನಿ ಸ್ಟಾಲ್ ಗೆ ಗುದ್ದಿ ಕಂಟೈನರ್ ಪಲ್ಟಿಯಾಗಿದೆ.