ವೇಗದ ಶತಕ ಸಿಡಿಸಿ ದಾಖಲೆ ನಿರ್ಮಿಸಿದ ಡೇವಿಡ್ ಮಿಲ್ಲರ್
ಮಾರ್ಚ್ 5ರಂದು ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ 67 ಎಸೆತಗಳನ್ನು ಎದುರಿಸಿದ ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ ಅಜೇಯ ಶತಕ ಸಿಡಿಸಿದ್ದಾರೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಜೋಶ್ ಇಂಗ್ಲಿಸ್ ಕೇವಲ 77 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಅತೀ ವೇಗದ ಶತಕದ ದಾಖಲೆ ಅವರ ಹೆಸರಲ್ಲಿತ್ತು ಅದನ್ನು ಡೇವಿಡ್ ಮಿಲ್ಲರ್ ಅಳಿಸಿ ಹಾಕಿದ್ದಾರೆ.
ಅದೇ ರೀತಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಶತಕ ಬಾರಿಸಿದ ಸೌತ್ ಆಫ್ರಿಕಾದ ಅತ್ಯಂತ ಹಿರಿಯ ಬ್ಯಾಟ್ಸ್ ಮೆನ್ ಎಂಬ ಹೆಗ್ಗಳಿಕೆಗೂ 35 ವರ್ಷದ ಮಿಲ್ಲರ್ ಪಾತ್ರರಾಗಿದ್ದಾರೆ.