ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆ: ಸಂಭ್ರಮಾಚರಣೆ
ಪುತ್ತೂರು: ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪುತ್ತೂರಿಗೆ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವುದೆಂದು ಘೋಷಣೆ ಮಾಡುತ್ತಲೇ ಪುತ್ತೂರಿಗರು ಕುಣಿದು ಕುಪ್ಪಳಿಸಿದ್ದಾರೆ.

ಮೆಡಿಕಲ್ ಕಾಲೇಜು ಘೋಷಣೆ ಆಗಬಹುದು ಎನ್ನುವ ನಿರೀಕ್ಷೆಯೊಂದಿಗೆ ಪುತ್ತೂರಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಹಿತ, ಕಾಂಗ್ರೆಸ್ ಮುಖಂಡರ, ವಲಯ ಅಧ್ಯಕ್ಷರುಗಳು, ಕಾರ್ಯಕರ್ತರು ಬೆಂಗಳೂರಿಗೆ ದೌಡಾಯಿಸಿದ್ದರು. ಅತ್ತ ಸಿಎಂ ಅವರು ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆ ಮಾಡುತ್ತಿದ್ದಂತೆ ಇತ್ತ ವಿಧಾನಸೌಧದ ಬಳಿ ಪುತ್ತೂರಿನಿಂದ ತೆರಳಿದ ಕಾಂಗ್ರೆಸಿಗರ ಹರ್ಷ, ಸಂಭ್ರಮ ಮುಗಿಲು ಮುಟ್ಟಿತ್ತು. ಬಳಿಕ ಶಾಸಕ ಅಶೋಕ್ ರೈ ಅವರನ್ನು ಹೆಗಲ ಮೇಲೆ ಕುಳ್ಳಿರಿಸಿದ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು. ಒಟ್ಟಿನಲ್ಲಿ ಕಾಂಗ್ರೆಸ್ ನಾಯಕರ, ಕಾರ್ಯಕರ್ತರ ಸಂಭ್ರಮಾಚರಣೆ ಭರ್ಜರಿಯಾಗಿ ನಡೆಯಿತು.