ಪುತ್ತೂರಿಗೆ ಸರಕಾರಿ ವೈದ್ಯಕೀಯ ಕಾಲೇಜು ಮಂಜೂರುಗೊಳಿಸಲು ಶ್ರಮಿಸಿದ ಶಾಸಕರಿಗೆ ಅಭಿನಂದನೆ-ಅಮ್ಜದ್ ಖಾನ್
ಪುತ್ತೂರಿಗೆ ಸರಕಾರಿ ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ ಹಾಗೂ ಮೆಡಿಕಲ್ ಕಾಲೇಜಿಗಾಗಿ ಅವಿರತ ಶ್ರಮಿಸಿದ ನಮ್ಮ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ನ ಚೇರ್’ಮೆನ್ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ.

ಸಾಧ್ಯವಾದಷ್ಟು ಬೇಗ ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದ ಕಾರ್ಯಗಳು ಕಾರ್ಯಗತಗೊಳ್ಳಲಿ ಎಂದು ನಾವು ಆಶಿಸುತ್ತೇವೆ. ಅನೇಕ NEET ವಿದ್ಯಾರ್ಥಿಗಳನ್ನು ಬೆಂಬಲಿಸುವ ಶೈಕ್ಷಣಿಕ ಕಾರ್ಯಕ್ರಮವನ್ನು ನಾವು ಮಾಡುತ್ತಿದ್ದು ಈ ನಿಟ್ಟಿನಲ್ಲಿ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಆಗುತ್ತಿರುವುದು ಅತೀವ ಸಂತಸ ತಂದಿದೆ, ಇದು ಸಾವಿರಾರು ವಿದ್ಯಾರ್ಥಿಗಳಿಗೆ ವರದಾನವಾಗಲಿದೆ ಎಂದು ಅವರು ತಿಳಿಸಿದ್ದಾರೆ.