ಕಾರು-ಆಕ್ಟಿವಾ ಡಿಕ್ಕಿ, ಶಿಕ್ಷಕಿ ಮೃತ್ಯು
ಕಾರು-ಆಕ್ಟಿವಾ ಪರಸ್ಪರ ಡಿಕ್ಕಿಯಾಗಿದ್ದು, ಆಕ್ಟಿವಾ ಸವಾರೆ ಮೃತಪಟ್ಟ ಘಟನೆ ಮೂಡುಬಿದಿರೆಯ ಶಿರ್ತಾಡಿ ಬಳಿ ಮಾ.7ರಂದು ಸಂಜೆ ವೇಳೆ ನಡೆದಿದೆ.

ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯ ಶಿಕ್ಷಕಿ ಸುಜಯ (35 ವ) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಮೃತ ಮಹಿಳೆಯು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಶಾಲೆಯಿಂದ ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಕಾರೊಂದು ಆಕ್ಟಿವಾಗೆ ಡಿಕ್ಕಿ ಹೊಡೆದಿದೆ. ಕೂಡಲೇ ರಸ್ತೆಗೆ ಎಸೆಯಲ್ಪಟ್ಟ ಸುಜಯ ಅವರ ತಲೆಗೆ ತೀವ್ರ ಗಾಯ ಉಂಟಾಗಿತ್ತು. ಆದುದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕಿ ಮೃತಪಟ್ಟಿದ್ದಾರೆ.