ಎಸ್.ಡಿ.ಪಿ.ಐ ಎಲ್ಲಾ ದಾಖಲೆಗಳನ್ನು ಸಲ್ಲಿಸಿದೆ, ನಿಷೇಧಿಸಲು ಯಾವುದೇ ಸಾಕ್ಷ್ಯಗಳಿಲ್ಲ- ಚುನಾವಣಾ ಆಯೋಗ
ನವದೆಹಲಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷವನ್ನು ನಿಷೇಧಿಸಲು ಬೇಕಾದ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿರುವುದಾಗಿ ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇಂಡಿಯಾ ಟುಡೇಗೆ ನೀಡಿದ ಹೇಳಿಕೆಯಲ್ಲಿ, ಎಸ್.ಡಿ.ಪಿ.ಐ ಎಲ್ಲಾ ಅಗತ್ಯ ದಾಖಲೆಗಳನ್ನು ಸಲ್ಲಿಸಿದೆ. ಇದುವರೆಗೆ ಪಿಎಫ್ ಐ ಮತ್ತು ಎಸ್ ಡಿಪಿಐ ನಡುವೆ ಯಾವುದೇ ಸಂಪರ್ಕವನ್ನು ಹೊಂದಿರುವುದು ಪತ್ತೆಯಾಗಿಲ್ಲ ಮತ್ತು ಅದು ರಾಜಕೀಯ ಪಕ್ಷವಾಗಿ ಎಲ್ಲಾ ದಾಖಲೆಗಳನ್ನು ಆಯೋಗಕ್ಕೆ ಸಲ್ಲಿಸಿದೆ. ಅದನ್ನು ನಿಷೇಧಿಸುವಂತಹ ಸಾಕ್ಷ್ಯಗಳು ನಮ್ಮಲ್ಲಿ ಇಲ್ಲ ಎಂದು ತಿಳಿಸಿರುವುದಾಗಿ ವರದಿಯಾಗಿದೆ
2009ರ ಜೂನ್ 21ರಂದು ಎಸ್ ಡಿಪಿಐ ಪಕ್ಷವನ್ನು ಸ್ಥಾಪಿಸಲಾಗಿದೆ. ಇದನ್ನು ಏಪ್ರಿಲ್ 13, 2010 ರಂದು ಭಾರತೀಯ ಚುನಾವಣಾ ಆಯೋಗದಲ್ಲಿ ನೋಂದಣಿ ಮಾಡಲಾಗಿದೆ.



