ಕರಾವಳಿರಾಜ್ಯರಾಷ್ಟ್ರೀಯ

ಗುಂಡ್ಯದಿಂದ ಸಕಲೇಶಪುರಕ್ಕೆ ಸುರಂಗ ಮಾರ್ಗ ನಿರ್ಮಾಣ ವಿಚಾರ ಲೋಕೋಪಯೋಗಿ ಸಚಿವರ ಸಭೆಯಲ್ಲಿ ಚರ್ಚೆ- ಗಡ್ಕರಿಗೆ ಮನವಿ: ಅಶೋಕ್ ರೈ

ಪುತ್ತೂರು: ಮಂಗಳೂರು- ಬೆಂಗಳೂರು ರಾ. ಹೆದ್ದಾರಿ 75 ರ ಗುಂಡ್ಯದಿಂದ ಸಕಲೇಶಪುರದವರೆಗೆ ಸುರಂಗ ಮಾರ್ಗ ನಿರ್ಮಾಣದ ಅಗತ್ಯತೆ ಇದ್ದು ಈ ವಿಚಾರದ ಬಗ್ಗೆ ಸೋಮವಾರ ರಾಜ್ಯ ಲೋಕೋಪಯೋಗಿ ಸಚಿವರಾದ ಸತೀಶ್‌ಜಾರಕಿಹೊಳಿಯವರ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಗಿದ್ದು, ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂದಿಸಿದಂತೆ ಅನುದಾನಕ್ಕಾಗಿ ಕೇಂದ್ರ ಹೆದ್ದಾರಿ ಸಚಿವರ ನಿತಿನ್‌ ಗಡ್ಕರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.



ರಾ.ಹೆದ್ದಾರಿ ಪ್ರಾಧಿಕಾರದ ಅಧೀನದಲ್ಲಿ ಇದೀಗ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಗುಂಡ್ಯದಿಂದ ಸಕಲೇಶಪುರದ ತನಕ ರಸ್ತೆಗಳು ಎತ್ತರತಗ್ಗಿನಿಂದ ಕೂಡಿದ್ದು ಮಾತ್ರವಲ್ಲದೆ ಘಾಟ್ ಕೂಡಾ ಇರುವದರಿಂದ ಈ ಭಾಗದಲ್ಲಿ ಸುಮಾರು 23 ರಿಂದ 25 ಕಿ ಮೀ ತನಕ ಸುರಂಗ ಮಾರ್ಗ ನಿರ್ಮಾಣಂದ ಅಗತ್ಯತೆ ಇದೆ. ದ ಕ ಮತ್ತು ಹಾಸನ ಈ ಎರಡು ಜಿಲ್ಲಾ ವ್ಯಾಪ್ತಿಯಲ್ಲಿ ಹೆದ್ದಾರಿ ಸಾಗುತ್ತಿದ್ದು, ಇಲ್ಲಿ ಸುರಂಗ ಮಾರ್ಗ ನಿರ್ಮಾಣವಾಗಬೇಕೆಂಬುದು ಹಲವು ವರ್ಷಗಳ ಬೇಡಿಕೆಯೂ ಆಗಿದೆ.



ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿ ಇದ್ದಾಗಿದ್ದು ನಿತ್ಯ ಸಾವಿರಾರು ವಾಹನಗಳ ಸಂಚಾರ ಇರುತ್ತದೆ. ರಸ್ತೆ ತಿರುವುಮುರುವಿನಿಂದ ಕೂಡಿದ ಕಾರಣ ಈ ಭಾಗದಲ್ಲಿ ಹೆಚ್ಚಿನ ಅಪಘಾತಗಳು ಉಂಟಾಗುತ್ತಿದೆ. ಈ ಕಾರಣಕ್ಕೆ ಸುರಂಗ ಮಾರ್ಗದ ನಿರ್ಮಾಣದ ಅಗತ್ಯತೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್‌ ಗಡ್ಕರಿಯವರಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.



ಸಭೆಯಲ್ಲಿ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್, ಮುಖ್ಯಮಂತ್ರಿಗಳ ಆರ್ಥಿಕ ಕಾರ್ಯದರ್ಶಿ ಬಸವರಾಜರೆಡ್ಡಿ, ಮಾಜಿ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ, ಕಲ್ಯಾಣ ಕರ್ನಾಟಕ ನಿಗಮದ ಚಯರ್‌ಮೆನ್ ಅಜಯ್‌ಧರ್ಮ ಸಿಂಗ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!