ಕರಾವಳಿಕ್ರೈಂ

ವಿಟ್ಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

ವಿಟ್ಲ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22 ವ.) ಮೃತಪಟ್ಟವರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈತ ಈ ಕೃತ್ಯ ಎಸಗಿಕೊಂಡಿದ್ದು, ಮನೆ ಮಂದಿ ಮರಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೃತರು ತಂದೆ, ತಾಯಿ ಹಾಗು ಸಹೋದರಿಯನ್ನು ಆಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!