ಹೋಳಿ ಹಬ್ಬ: ಉತ್ತರ ಪ್ರದೇಶದ ಮಸೀದಿಗಳಿಗೆ ಟಾರ್ಪಲಿನ್ ಹೊದಿಕೆ
ಲಖನೌ: ಹೋಳಿ ಹಬ್ಬದ ಆಚರಣೆ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಅನೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದ್ದು ಯಾವುದೇ ಅಹಿತಕ ಘಟನೆಗಳು ನಡೆಯದಂತೆ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗುವ ‘ಲಾಟ್ ಸಾಹೇಬ್’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ನಿರ್ಧರಿಸಿದೆ.
ಮೆರವಣಿಗೆ ಸಾಗುವ ಮಾರ್ಗದಲ್ಲಿನ 20 ಮಸೀದಿಗಳಿಗೆ ಟಾರ್ಪಾಲಿನ್ ಹೊದಿಸಲಾಗುವುದು. ಈ ಮಾರ್ಗದುದ್ದಕ್ಕೂ 350 ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ ಮಸೀದಿಗಳು ಹಾಗೂ ಟ್ರಾನ್ಫ್‌ಫಾರ್ಮರ್‌ಗಳ ಬಳಿ ತಡೆಗೋಡೆಗಳನ್ನು ನಿರ್ಮಿಸಲಾಗಿದೆ ಎಂದು ತಿಳಿದು ಬಂದಿದೆ.