ಕರಾವಳಿರಾಜ್ಯ

ಅತೀ ದೊಡ್ಡ ಪ್ರಮಾಣದ ಡ್ರಗ್ಸ್ ಕೇಸ್ ಬೇಧಿಸಿದ ಮಂಗಳೂರು ಪೋಲೀಸರನ್ನು ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.




ಸುಮಾರು 75 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದಿದ್ದಾರೆ.



ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!