ಪಾಕಿಸ್ತಾನ ನಮ್ಮ ವಿರುದ್ಧ ಪರೋಕ್ಷ ಯುದ್ಧ ಮಾಡುತ್ತಿದೆ-ಪ್ರಧಾನಿ ಮೋದಿ
ನವದೆಹಲಿ: ಪಾಕಿಸ್ತಾನ ಭಾರತದ ವಿರುದ್ಧ ಪರೋಕ್ಷ ಯುದ್ಧ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಅಮೆರಿಕ ಮೂಲದ ಖ್ಯಾತ ಪಾಡ್‌ಕ್ಯಾಸ್ಟರ್ ಲೆಕ್ಸ್ ಫ್ರಿಡ್‌ಮನ್ ಅವರೊಂದಿಗಿನ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧದ ಬಗ್ಗೆ ಮಾತನಾಡಿದ್ದಾರೆ.
ಪಾಕಿಸ್ತಾನವು ಸಾಮರಸ್ಯದ ಸಹಬಾಳ್ವೆಯನ್ನು ಬಯಸುತ್ತಿಲ್ಲ. ಬದಲಾಗಿ ಭಾರತದ ವಿರುದ್ಧ ಪರೋಕ್ಷ ಯುದ್ಧ ಮಾಡುತ್ತಿದೆ. ಈ ಪರಿಸ್ಥಿತಿಯು ಸಿದ್ಧಾಂತಗಳಲ್ಲಿನ ವ್ಯತ್ಯಾಸಗಳಿಂದಲ್ಲ, ಬದಲಾಗಿ ಭಯೋತ್ಪಾದಕ ಮನಸ್ಥಿತಿಯಿಂದಾಗಿ ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ಸಂಬಂಧಗಳನ್ನು ಸುಧಾರಿಸಲು ಮನಸ್ಥಿತಿಯಲ್ಲಿ ಬದಲಾವಣೆ ಮತ್ತು ಫಲಪ್ರದ ಸಂಭಾಷಣೆಯ ಅಗತ್ಯವಿದೆ. ಪಾಕಿಸ್ತಾನ ಈಗ ಭಾರತಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೆ ಪ್ರಕ್ಷುಬ್ಧತೆಯ ಕೇಂದ್ರಬಿಂದುವಾಗಿದೆ ಎಂದು ಮೋದಿ ಹೇಳಿದ್ದಾರೆ