ಅರಂತೋಡು ಬೈಕ್ ಗಳ ನಡುವೆ ಡಿಕ್ಕಿ, ಸವಾರರಿಗೆ ಗಾಯ
ಸುಳ್ಯ: ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿ ಡಿಕ್ಕಿ ಹೊಡೆದು ಮೂರು ಸವಾರರಿಗೆ ಗಾಯ ಆದ ಘಟನೆ ನಡೆದಿದೆ.

ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.ಒಬ್ಬ ಸವಾರನ ಕಾಲಿನ ಹೆಬ್ಬೆರಳು ತುಂಡಾಗಿ ರಸ್ತೆಯಲ್ಲಿ ಬಿದ್ದುಕೊಂಡಿತು. ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.