ಕಾಂಗ್ರೇಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ವಿರುದ್ದ ಪ್ರಕರಣ ದಾಖಲು
ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಬಶೀರ್ ಪರ್ಲಡ್ಕ ಎಂಬವರು ಹಕೀಂ ವಿರುದ್ಧ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಹಕೀಂ ಕೂರ್ನಡ್ಕ ಅವರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಆರೋಪ ಹೊರಿಸಿ ವಾಯ್ಸ್ ಮೆಸೇಜ್ ಹರಿಯಬಿಟ್ಟಿದ್ದು ಅದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಹಕೀಮ್ ಕೂರ್ನಡ್ಕ ಅವರನ್ನು ಮಾ.17ರಂದು ಸಂಜೆ ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೋಳಿಸಿದ್ದರು ಎಂದು ತಿಳಿದು ಬಂದಿದೆ.



