ನಾಗ್ಪುರದಲ್ಲಿ ಹಿಂಸಾಚಾರ, ಹಲವರಿಗೆ ಗಾಯ
ನಾಗ್ಪುರ ನಗರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ವರದಿಯಾಗಿದೆ.

ಔರಂಗಜೇಬ್ ಸಮಾಧಿ ತೆರವುಗೊಳಿಸುವಂತೆ ಆಗ್ರಹಿಸಿ ಬಜರಂಗದಳದ ಸದಸ್ಯರು ಸೋಮವಾರ ನಡೆಸಿದ ಪ್ರತಿಭಟನೆ ವೇಳೆ, ಮುಸ್ಲಿಂ ಸಮುದಾಯದ ಪವಿತ್ರ ಗ್ರಂಥ ಕುರಾನ್ ಅನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿ ಹಬ್ಬಿದ ಪರಿಣಾಮ ನಾಗ್ಪುರದ ಕೇಂದ್ರ ಭಾಗದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.
ಸೋಮವಾರ ರಾತ್ರಿ ಚಿಟ್ನಿಸ್ ಪಾರ್ಕ್ ಮತ್ತು ಮಹಲ್ ಪ್ರದೇಶಗಳಲ್ಲಿ ಹಿಂಸಾಚಾರ ನಡೆದಿತ್ತು. ಪೊಲೀಸರು ಸೇರಿದಂತೆ ಸುಮಾರು 15 ಜನರು ಘರ್ಷಣೆಯಲ್ಲಿ ಗಾಯಗೊಂಡಿದ್ದರು. ನಂತರ ರಾತ್ರಿ 10.30ರ ಸುಮಾರಿಗೆ ಹಂಸಪುರಿ ಪ್ರದೇಶದಲ್ಲಿ ಘರ್ಷಣೆ ಭುಗಿಲೆದ್ದಿದ್ದು, ಉದ್ರಿಕ್ತರ ಗುಂಪು ವಾಹನ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದ್ದರು.