ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವ ಮೂಲಕ ಕಾಂಗ್ರೆಸ್ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದೆ- ಬೊಮ್ಮಾಯಿ
ಕಾಂಗ್ರೆಸ್ ಸಂವಿಧಾನದ ಮೂಲ ತತ್ವಕ್ಕೆ ವಿರುದ್ಧವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿತಮ್ಮ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ಜನರಿಗೆ ಮೋಸ ಮಾಡುತ್ತಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡಿರುವುದು ಅಸಂವಿಧಾನಿಕ ಎಂದರು.