ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಯುವಕನನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು
ಪುತ್ತೂರು:ಪುತ್ತೂರು ಪರ್ಲಡ್ಕ ರಸ್ತೆಯ ಕಲ್ಲಿಮಾರು ಎಂಬಲ್ಲಿನ ಕಾಲುದಾರಿಯಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಾ.18ರ ಸಂಜೆ ನಡೆದಿದೆ.
ಬಾಡಿಗೆ ಮನೆಯಲ್ಲಿ ವಾಸವಿರುವ ಗದಗ ಮೂಲದ ಲಿಂಗಪ್ಪ ಎಂಬಾತ ಕಲ್ಲಿಮಾರು ಬಳಿ ನಿಂತುಕೊಂಡು ಕಾಲುದಾರಿಯಲ್ಲಿ ಶಾಲೆಯಿಂದ ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.