ಕರಾವಳಿಕ್ರೈಂ

ಮೀನು ಕದ್ದ ಆರೋಪ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿತ!

ಉಡುಪಿ: ಮೀನು ಕದ್ದ ಆರೋಪದ ಮೇಲೆ ಮಲ್ಪೆಯಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಥಳಿಸಿದ ಘಟನೆ ವರದಿಯಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆದ ನಂತರ ಮಾರ್ಚ್ 19 ರಂದು ಈ ಘಟನೆ ಬೆಳಕಿಗೆ ಬಂದಿದೆ.


ಮಹಿಳೆ ಮೀನು ಕದ್ದಿದ್ದಾರೆಂದು ಆರೋಪಿಸಿ ಇನ್ನೊರ್ವ ಮಹಿಳೆ ಹಲ್ಲೆ ಮಾಡಿದ್ದಾರೆ. ನಂತರ ಸ್ಥಳೀಯರು ಸೇರಿ, ಆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡುತ್ತಿರುವ
ವೀಡಿಯೊದಲ್ಲಿ ಸೆರೆಯಾಗಿದೆ. ಮಲ್ಪೆ ಬಂದರಿನಲ್ಲಿ ಮೀನು ಇಳಿಸುವಾಗ ಮೀನುಗಾರ ಮಹಿಳೆಯೊಬ್ಬರು ಇನ್ನೊಬ್ಬ ಮಹಿಳೆಯನ್ನು ಹೊಡೆಯುತ್ತಾ ದೋಣಿಗಳಿಂದ ಮೀನು ಕದ್ದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸೀಗಡಿ ಕಳ್ಳತನದ ಆರೋಪದ ಮೇಲೆ ದೋಣಿ ಸಿಬ್ಬಂದಿ ಮಹಿಳೆಯನ್ನು ಪ್ರಶ್ನಿಸಿದಾಗ ಅವರು ಆರಂಭದಲ್ಲಿ ಆರೋಪಗಳನ್ನು ನಿರಾಕರಿಸಿದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!