ಕರಾವಳಿಕ್ರೈಂ

ಉಡುಪಿ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣ : ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘಟನೆಗೆ ದಿಗ್ಧಮೆ ವ್ಯಕ್ತಪಡಿಸಿದ್ದು ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ.

ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೊ ಕಂಡು ದಿಗ್ಧಮೆಯಾಯಿತು. ಕಾರಣವೇನೆ ಇರಲಿ ಒಬ್ಬ ಮಹಿಳೆಗೆ ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರಿಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ. ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಘಟನೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಆಘಾತ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!