ಕರಾವಳಿಕ್ರೈಂ

ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣ: ನಾಲ್ವರ ಬಂಧನ

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಗೆ ಥಳಿಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.

Oplus_131072



ಮೀನುಗಾರಿಕೆಗೆ ತೆರಳಿದ ಬೋಟಿನಿಂದ ಬಂದರಿನಲ್ಲಿ ಮೀನು ಖಾಲಿ ಮಾಡುತ್ತಿದ್ದ ಸಂದರ್ಭ, ಮಹಿಳೆ ದುಬಾರಿ ಸಿಗಡಿ ಮೀನನ್ನು ಕದ್ದಿದ್ದಾಳೆ. ಮೀನು ಕದ್ದಿದ್ದನ್ನು ವಿಚಾರಣೆ ಮಾಡಿದಾಗ ಆಕೆ ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಸ್ಥಳದಲ್ಲಿದ್ದ ಮರಕ್ಕೆ ಕಟ್ಟಿ ಹಾಕಿ ಸಂಬಂಧಪಟ್ಟವರು ಥಳಿಸಿದ್ದಾರೆ. ಘಟನೆಯ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿತ್ತು.

Leave a Reply

Your email address will not be published. Required fields are marked *

error: Content is protected !!