ಹನಿ ಟ್ರ್ಯಾಪ್ ಕೇಸ್: ಸಿಎಂ ಭೇಟಿಯಾದ ರಾಜೇಂದ್ರ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಚಿವ ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ಗೆ ಯತ್ನಿಸಿದ ಕೇಸ್ ವಿಚಾರ ಭಾರಿ ಚರ್ಚೆಯಲ್ಲಿರುವಂತೆ ಸಚಿವ ರಾಜಣ್ಣ ಪುತ್ರ ಪರಿಷತ್ ಸದಸ್ಯ ರಾಜೇಂದ್ರ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ.

ಹನಿಟ್ರ್ಯಾಪ್ ಯತ್ನ ಸಂಬಂಧ ಎಲ್ಲಾ ಸಾಕ್ಷ್ಯಗಳನ್ನು ಸಿಎಂಗೆ ನೀಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಡಿಜಿ ಐಜಿಪಿಗೆ ದೂರು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಎಂಎಲ್‌ಸಿ ರಾಜೇಂದ್ರ ರಾಜಣ್ಣ, ನನಗೆ ಹನಿಟ್ರ್ಯಾಪ್ ನಡೆಸಲು ಕಳೆದ 3 ತಿಂಗಳಿಂದ ಯತ್ನ ನಡೆಸಿದ್ದರು. ಹನಿಟ್ರ್ಯಾಪ್ ನಡೆಸಲು ನಮ್ಮ ಮಧುಗಿರಿ ನಿವಾಸಕ್ಕೂ ಬಂದಿದ್ದರು. ಬೆಂಗಳೂರಿನ ಸರ್ಕಾರಿ ನಿವಾಸಕ್ಕೂ ಬಂದು ಹನಿಟ್ರ್ಯಾಪ್‌ಗೆ ಯತ್ನಿಸಿದ್ದರು. ಯಾವ ಕಾರಣಕ್ಕಾಗಿ ನನಗೆ ಹನಿಟ್ರ್ಯಾಪ್‌ಗೆ ಯತ್ನಿಸಿದ್ದರೆಂದು ಗೊತ್ತಿಲ್ಲ. ಯಾರೆಂದು ಹೇಗೆ ಹೇಳೋದು?, ತನಿಖೆಯಾಗಲಿ ಎಲ್ಲ ಹೊರಬರುತ್ತೆ ಎಂದಿದ್ದಾರೆ.