ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ಎಸ್.ಡಿ ಆತ್ಮಹತ್ಯೆ
ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ, ಹಲವು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ಸರ್ವೆ ದೋಳಗುತ್ತು ನಿವಾಸಿ ರಾಜೇಶ್ ಎಸ್.ಡಿ(43) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾ.23ರಂದು ಮನೆಯಲ್ಲಿ ವಿಷ ಸೇವಿಸಿದ್ದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ.24ರಂದು ಸಂಜೆ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ತಾಯಿ, ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.