ಪತ್ನಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿಸಿದ ಪತಿ
ಬೆಂಗಳೂರು: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದು ಬಳಿಕ ಆಕೆ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿರುವ ಭೀಕರ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ. ಪ್ರಕರಣ ಸಂಬಂಧ ಹಂತಕ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ.

ಮಹಾರಾಷ್ಟ್ರ ಮೂಲದ ಆರೋಪಿ ಪತಿ ರಾಕೇಶ್ ಎಂಬಾತ ತನ್ನ 32 ವರ್ಷದ ಪತ್ನಿಯನ್ನು ಕೊಂದು ಬಳಿಕ ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿಟ್ಟಿದ್ದ. ಬಳಿಕ ಈ ವಿಚಾರವನ್ನು ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಮಹಾರಾಷ್ಟ್ರ ಪೊಲೀಸರ ಮಾಹಿತಿ ಆಧರಿಸಿ ಬೆಂಗಳೂರಿನ ಹುಳಿಮಾವು ಪೊಲೀಸರು ಮನೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ ದೊಡ್ಡಕಮ್ಮನಹಳ್ಳಿ ಮನೆಯಲ್ಲಿ ವಾಸವಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ದಂಪತಿ, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ವರ್ಕ್ ಫ್ರಂ ಹೋಂ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಏಕೆ ಕೊಲೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎನ್ನುವುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದು ಬಂದಿದಲ್ಲ. ಇದೀಗ ಹುಳಿಮಾವು ದೊಡ್ಡಕಮ್ಮನಹಳ್ಳಿಯ ಮನೆಗೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.